ಇಂದು 153ನೇ ಗಾಂಧಿ ಜಯಂತಿ: ರಾಷ್ಟ್ರಪಿತನನ್ನು ಸ್ಮರಿಸಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 153ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಅಹಿಂಸೆಯ ಹರಿಕಾರ ಮಹಾತ್ಮಾಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಕುರಿತು ಟ್ವೀಟ್‌ ಮಾಡಿದ ಮೋದಿಯವರು “ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಕಾರಣ ಈ ವರ್ಷದ ಆಚರಣೆಯು ಇನ್ನಷ್ಟು ವಿಶೇಷವಾಗಿದೆ. ಮಹಾತ್ಮ ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿಯೊಬ್ಬರೂ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಅವರು ದೇಶದ ಜನತೆಯನ್ನು ಒತ್ತಾಯಿಸಿದ್ದು “ಬಾಪು ಅವರ ಆದರ್ಶಗಳನ್ನು ಸದಾ ಪಾಲಿಸುತ್ತಿರಬೇಕು. ಗಾಂಧೀಜಿಯವರಿಗೆ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ” ಎಂದಿದ್ದಾರೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕೂಡ ಗಾಂಧೀಜಿಯವರಿಗೆ ಗೌರವ ಸಮರ್ಪಿಸಿದ್ದು ಭಾನುವಾರ ಬೆಳಗ್ಗೆ ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ ಟ್ವೀಟರ್‌ ನಲ್ಲಿ ಪ್ರತಿಯೊಬ್ಬರೂ ಮಹಾತ್ಮ ಗಾಂಧಿಯವರ ಹೆಜ್ಜೆಗಳನ್ನು ಅನುಸರಿಸಿ ಮತ್ತು ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಅವರ ಜನ್ಮ ವಾರ್ಷಿಕೋತ್ಸವವು ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಒಂದು ಸಂದರ್ಭವಾಗಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!