ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಮಧ್ಯಂತರ ಜಾಮೀನು ಅರ್ಜಿ ವಿಚಾರ ಇಂದು ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.
ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಜಾಮೀನು ಅರ್ಜಿ ಕೋರಿ ಅವರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ಆಕ್ಷೇಪಿಸಿದರು.
ಅಲ್ಲದೆ, ದರ್ಶನ್ಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತದೆ ಎಂಬ ಬಗ್ಗೆ ಉಲ್ಲೇಖ ಇಲ್ಲ ಎಂದು ಎಸ್‌ಪಿಪಿ ವಾದ ಮಾಡಿದರು. ಇದನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿ ‘ಆರೋಗ್ಯ ಪ್ರತಿಯೊಬ್ಬ ಖೈದಿಯ ಹಕ್ಕು’ ಎಂದಿದ್ದಾರೆ.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ವಾದ-ಪ್ರತಿವಾದವನ್ನು ಆಲಿಸಿ ಇಂದು ಆದೇಶ ನೀಡಲಿದೆ.