ಇಂದು ಛತ್ರಪತಿ ಶಿವಾಜಿ ಜಯಂತಿ: ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಅರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ರಪತಿ ಶಿವಾಜಿ ಮಹಾರಾಜರ 395ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮನ ಸಲ್ಲಿಸಿದರು.

ಭಾರತ ಮಾತೆಯ ಶ್ರೇಷ್ಟ ಪುತ್ರ ಛತ್ರಪತಿ ಶಿವಾಜಿ ಮಹಾರಾಜ್, ಧೈರ್ಯ, ಶೌರ್ಯ, ಅನುಕಂಪ ಮತ್ತು ಉತ್ತಮ ಆಡಳಿತಗಾರರಾಗಿದ್ದ ಅವರಿಗೆ ನಮಿಸುತ್ತೇನೆ. ಅವರ ಜೀವನ ಲಕ್ಷಾಂತರ ಜನರಿಗೆ ಸ್ಪೂರ್ತಿ ಎಂದು ಮೋದಿ ಹೇಳಿದ್ದಾರೆ.

“ನಾನು ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಶೌರ್ಯ ಮತ್ತು ದೂರದೃಷ್ಟಿಯ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿತು, ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪೀಳಿಗೆಗೆ ಸ್ಫೂರ್ತಿ ನೀಡಿತು. ಅವರು ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರು ಶೌರ್ಯವಂತ ಯೋಧರಾಗಿ ಮತ್ತು ಅತ್ಯುತ್ತಮ ಆಡಳಿತಗಾರರಾಗಿ ತಮ್ಮದೇ ಛಾಪನ್ನು ಮೂಡಿಸಿದವರು. ಬಲಿಷ್ಟ ನೌಕಾದಳವನ್ನು ಕಟ್ಟುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಅನುಷ್ಟಾನಿಸಿದ ಅವರು ಎಲ್ಲಾ ರಂಗಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿದ್ದರು. ಅನ್ಯಾಯ ಮತ್ತು ದೌರ್ಜನ್ಯದ ವಿರುದ್ದ ಹೋರಾಡಿದ ಅವರನ್ನು ಸದಾ ಸ್ಮರಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿ ಮೋದಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!