ಇಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಾತ್ರೇಯ ಜಯಂತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀ ಗುರುದತ್ತಾತ್ರೇಯ ಬಾಬಾಬುಡನಗ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀ ಗುರುದತ್ತಾತ್ರೇಯ ಜಯಂತಿ ಆಚರಿಸಲಾಗುತ್ತದೆ.

ಇಂದು ನಡೆಯುವ ದತ್ತಜಯಂತಿಗೆ ಜಿಲ್ಲಾದ್ಯಂತ ನಾಲ್ಕು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಿಪಕ್ಷ ನಾಯಕ ಆರ್. ಅಶೋಕ್ ಇದೇ ಮೊದಲ ಬಾರಿಗೆ ದತ್ತಮಾಲೆ ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ. ಕೆಲ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೆಲವೆಡೆ ಡ್ರೋನ್ ಕಣ್ಗಾವಲು ಇರಿಸಲಾಗಿದೆ.

ಒಟ್ಟಾರೆ 500 ಹೆಚ್ಚು ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಮಧ್ಯಾಹ್ನ ಎರಡು ಗಂಟೆಗೆ ನಡೆಯುವ ಶೋಭಾಯಾತ್ರೆಗೆ 80 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಬಿಜೆಪಿ ನಾಯಕರಾದ ಸಿಟಿ ರವಿ, ಸುನಿಲ್ ಕುಮಾರ್, ಶೋಭಾ ಕರಂದ್ಲಾಜೆ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!