ಇಂದು ಡಾ.ರಾಜ್‌ಕುಮಾರ್‌ ಜನ್ಮದಿನ, ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದ ಕುಟುಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ವರನಟ ಡಾ.ರಾಜ್‌ಕುಮಾರ್ ಅವರ 95ನೇ ಜನ್ಮದಿನ.

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಅಣ್ಣಾವ್ರ ಹಾಡುಗಳು ಹಾಗೂ ಫೋಟೊಗಳನ್ನು ಅಪ್‌ಲೋಡ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

ಇತ್ತ ಡಾ. ರಾಜ್‌ ಕುಟುಂಬ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದೆ. ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ಡಾ.ರಾಜ್ ಪುತ್ರಿ ಲಕ್ಷ್ಮಿ ದಂಪತಿ, ಅಶ್ವಿನಿ ರಾಜ್‌ಕುಮಾರ್ ,ಪುತ್ರಿ ವಂದಿತಾ ಆಗಮಿಸಿದ್ದಾರೆ. ಡಾ.ರಾಜ್ ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ ಸಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!