Tuesday, October 14, 2025

ಇಂದು ಡಾ. ವಿಷ್ಣುವರ್ಧನ್‌ ಜನ್ಮದಿನ: ಅಭಿಮಾನ್‌ ಸ್ಟುಡಿಯೋ ಬಳಿ ಸೆಲಬ್ರೇಷನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಹಸಸಿಂಹ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್‌ ಅವರ 75ನೇ ಜನ್ಮದಿನದ ಹಿನ್ನೆಲೆ ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಭಿಮಾನ್ ಸ್ಟುಡಿಯೋಗೆ ಪ್ರವೇಶ ನೀಡದ ಹಿನ್ನೆಲೆ ಪರ್ಯಾಯ ಜಾಗದಲ್ಲಿ ವಿಷ್ಣು ಜನ್ಮದಿನಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಬರ್ತ್‌ಡೇ ಸೆಲಬ್ರೇಷನ್‌ಗೆ ಸಿದ್ಧತೆ ನಡೆದಿದೆ.

ಮಂಟಪ ತಯಾರಿಸಿ ಪೂಜೆ ಮಾಡಿ ಅಮೃತ ಮಹೋತ್ಸವ ಆಚರಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ದಾದಾ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ, ರಕ್ತದಾನ ಸಮಾಜಮುಖಿ ಕಾರ್ಯಗಳು ನಡೆಯಲಿವೆ.

ರಾಜ್ಯದ ವಿವಿಧ ಮೂಲೆಗಳಿಂದ ಅಭಿಮಾನಿಗಳು ಆಗಮಿಸಲಿದ್ದು, ಮೈಸೂರಿನ ಸ್ಮಾರಕದಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬದ ಆಚರಣೆ ನಡೆಯಲಿದೆ. ಕುಟುಂಬಸ್ಥರು ಮೈಸೂರಿಗೆ ತೆರಳಿ ಪೂಜೆ ಸಲ್ಲಿಸಿ ಅಮೃತ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ. 

error: Content is protected !!