ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಶಾ ಸಭೆ ಮಾಡುವ ಮೂಲಕ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಇಂದು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ದಿಶಾ ಸಭೆ ಆರಂಭಗೊಳ್ಳಲಿದೆ. ಒಂದು ಕಡೆ ಕುಮಾರಸ್ವಾಮಿ ಅವರು ಕೇಂದ್ರದ ಯಾವೆಲ್ಲಾ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎನ್ನುವ ಕುತೂಹಲ ಇದೆ. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಭಾಗಿಯಾಗಲಿದ್ದಾರೆ.
ರಾಜಕೀಯವನ್ನು ಕುಟುಂಬ ವ್ಯಾಪಾರ ಮಾಡಿಕೊಳ್ಳುವ ಕಲೆಯನ್ನು ಈ ಮಾಜಿ ಜಾತ್ಯತೀತ ನಾಯಕರಿಂದ ಕಲಿಯಬಹುದು