ಸಿಇಟಿ-2023ರ ಅರ್ಜಿ ತಿದ್ದುಪಡಿಗೆ ಇಂದು ಕೊನೆಯ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯುಜಿಸಿಇಟಿ-2023ಕ್ಕೆ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೊನೆಯ ಅವಕಾಶ ನೀಡಿದ್ದು, ಇಂದು ಅಂತಿಮ ದಿನವಾಗಿದೆ. ಅರ್ಜಿ ತಿದ್ದುಪಡಿ ಮಾಡಲು ಬಯಸುವ ಅಭ್ಯರ್ಥಿಗಳು ಇಂದು ರಾತ್ರಿ 11.59ರೊಳಗೆ ಅರ್ಜಿ ತಿದ್ದುಪಡಿ ಮಾಡಬಹುದು.

ಸಿಇಟಿ-2023 ರ ಫಲಿತಾಂಶ ಪ್ರಕಟಿಸುವ ಮುನ್ನ ಇಂದು ಅರ್ಜಿ ತಿದ್ದುಪಡಿಗೆ ಕೊನೆಯ ಅವಕಾಶವಾಗಿದೆ. ಸಿಇಟಿ-2023ರ ಫಲಿತಾಂಶ ಪ್ರಕಟವಾದ ಬಳಿಕಯಾವುದೇ ಕಾರಣಕ್ಕೂ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಅಥವಾ ಮೀಸಲಾತಿ ಕ್ಲೇಮ್ ಮಾಡಲು ಅವಕಾಶವಿರುವುದಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ಹೇಳಿದೆ.

ಆದ್ದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ತಮಗೆ ಸಂಬಂಧಿಸಿದ ಅರ್ಜಿಗಳಲ್ಲಿ ಮಾಡಿರುವ ಕ್ಲೇಮ್‌ಗಳನ್ನು / ಮಾಹಿತಿಯನ್ನು ತಪ್ಪದೇ ಕಡ್ಡಾಯವಾಗಿ ಇಂದೇ ಪರಿಶೀಲಿಸಿಕೊಳ್ಳಿ ಮತ್ತು ತಿದ್ದುಪಡಿಗಳಿದ್ದರೆ ಸರಿಪಡಿಸಿಕೊಳ್ಳಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!