October 16, 2026
Friday, October 16, 2026
spot_img

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಂಪೇಗೌಡ ಜಯಂತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ೧೫ ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಒಂದೇ ಬಾರಿಗೆ 15 ಲಕ್ಷ ಸಸಿಗಳನ್ನು ನೆಟ್ಟು ವಿಶ್ವದಾಖಲೆ ಮಾಡುವ ಗುರಿಯೊಂದಿಗೆ ಹಸಿರು ಅಭಿಯಾನಕ್ಕೆ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನ ಕೈಗೊಂಡಿದೆ. ಬೆಳಗ್ಗೆ 11 ಗಂಟೆಗೆ ಕೃಷ್ಣಪಥ ರಸ್ತೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಡಿ.ಕೆ. ಶಿವಕುಮಾರ್‌ ಕೆಂಪೇಗೌಡರ 7 ಪುರಜ್ಯೋತಿಗಳ ಸ್ವೀಕಾರ ಮಾಡಲಿದ್ದಾರೆ.

ಎಲ್ಲೆಲ್ಲಿ ಗಿಡ ನೆಡಲಾಗುತ್ತಿದೆ?

ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನಗಳು ಸೇರಿದಂತೆ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ವಿಂಗಡಿಸಲಾಗಿದೆ.

Must Read