ಇಂದು ರಾಷ್ಟ್ರೀಯ ನವೋದ್ದಿಮೆ ದಿನ- ಏನಿದರ ವಿಶೇಷತೆ ? ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಪ್ರೋತ್ಸಾಹಿಸುವ ಉದ್ದೇಶದಿಂದ ಕಳೆದ ವರ್ಷದಿಂದ ಜನವರಿ 16 ರಂದು ರಾಷ್ಟ್ರೀಯ ನವೋದ್ದಿಮೆ ದಿನವನ್ನು ಆಚರಿಸಲಾಗುತ್ತಿದೆ. ದೇಶದ ಅರ್ಥವ್ಯವಸ್ಥೆಯನ್ನು ಭವಿಷ್ಯದಲ್ಲಿ ಗಟ್ಟಿಗೊಳಿಸಲಿರೋ ಈ ನವೋದ್ದಿಮೆಗಳನ್ನು ನವಭಾರತದ ಬೆನ್ನೆಲುಬು ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಈ ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಹಿನ್ನೆಲೆಯಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುವ ಗುರಿಯೊಂದಿಗೆ ದೇಶದ 75ಕ್ಕೂ ಅಧಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇದರ ಹಿನ್ನೆಲೆಯಲ್ಲಿ ಜನವರಿ 10ರಿಂದ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (DPIIT) ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಸ್ಟಾರ್ಟ್ಅಪ್ ಇಂಡಿಯಾ ಇನ್ನೋವೇಶನ್ ವೀಕ್ ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮವು ಇಂದು ಮುಕ್ತಾಯಗೊಳ್ಳಲಿದ್ದು “ಇಂದಿನ ಸಂಸ್ಥಾಪಕರು, ನಾಳೆಯ ನಾಯಕರು” ವಿಷಯದ ಕುರಿತಾದ ವೆಬಿನಾರ್‌ ಇತ್ಯಾದಿ ಈವೆಂಟ್‌ ಗಳು ನಡೆದಿವೆ.

ಹಿನ್ನೆಲೆ:
ಜನವರಿ 15, 2022 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 16 ರಂದು ರಾಷ್ಟ್ರೀಯ ಸ್ಟಾರ್ಟ್ಅಪ್ ದಿನವನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದರು. ಅದೇ ವರ್ಷ ಭಾರತವು ಮೊದಲ ರಾಷ್ಟ್ರೀಯ ಸ್ಟಾರ್ಟ್ಅಪ್ ದಿನವನ್ನು ಆಚರಿಸಿತು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದಯೋನ್ಮುಖ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿಯವರು ಸಂವಾದದ ಸಂದರ್ಭದಲ್ಲಿ, ಕಳೆದ ಕೆಲವು ವರ್ಷಗಳಿಂದ ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯು ಉತ್ತಮ ಪ್ರದರ್ಶನ ನೀಡಿದ ನವೋದ್ದಿಮೆಗಳನ್ನು ಗುರುತಿಸಿ ಅವುಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸುತ್ತದೆ. ಸ್ಟಾರ್ಟ್‌ಅಪ್ ಇಂಡಿಯಾ ಅಡಿಯಲ್ಲಿ ಸ್ಟಾರ್ಟಪ್‌ ಗಳು ಹಾಗು ಉದ್ದಿಮೆದಾರರು ಪ್ರದರ್ಶಿಸಿದ ಶ್ರೇಷ್ಠತೆಯನ್ನು ಗುರುತಿಸಿ ಬಹುಮಾನ ನೀಡಲಾಗುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!