Saturday, June 25, 2022

Latest Posts

ಇಂದು ಸಾಧ್ಯವಿಲ್ಲ… ಇನ್ನೆರಡು ದಿನ ಕಾಯಿರಿ: ಹಿಜಾಬ್ ವಿಚಾರಣೆ ಮುಂದೂಡಿದ ಸಿಜೆಐ ಎನ್​.ವಿ.ರಮಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದ ಹಿಜಾಬ್ ವಿವಾದದ ಕುರಿತ ಅರ್ಜಿ ವಿಚಾರಣೆ ನಡೆಸಲು ಇಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್​.ವಿ. ರಮಣ ಅವರ ಮುಂದೆ ಬಂದಿದ್ದು, ಆದರೆ ‘ಇಂದು ಸಾಧ್ಯವಾಗುವುದಿಲ್ಲ, ದಯವಿಟ್ಟು ಇನ್ನೂ ಎರಡು ದಿನ ಕಾಯಿರಿ’ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆ ಹಿಜಾಬ್ ವಿಚಾರಣೆಯನ್ನು ಮುಂದೂಡಿದೆ.
ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಇನ್ನೆರಡು ದಿನ ಕಾಯಿರಿ ಎಂದು ಎನ್​.ವಿ.ರಮಣ ಹೇಳಿದ್ದಾರೆ.
ಈ ಹಿಂದೆ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss