ಇಂದು ರಾಜ್ಯದ ನೂತನ ಸಿಎಂ ಪಟ್ಟಾಭಿಷೇಕ, ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ನೂತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಸಿಎಂ ಪಟ್ಟ ಅಲಂಕರಿಸುತ್ತಿದ್ದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇವರ ಜೊತೆಯಲ್ಲಿ ಉಪಮುಖ್ಯಮಂತ್ರಿಯಾಗಿ ಮೊದಲ ಬಾರಿ ಡಿ.ಕೆ. ಶಿವಕುಮಾರ್ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.

ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಸಿಎಂ ಹಾಗೂ ಡಿಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಸೇರಿ 10ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ, ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಹಾಗೂ ಜಮೀರ್ ಅಹಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ಎನ್. ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ಜಾರ್ಖಂಡ್ ಸಇಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯಾಗಿದ್ದು, ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವೇದಿಕೆ ಮೇಲೆ 30 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿದೆ. ವೇದಿಕೆಯ ಮುಂಭಾಗ ಶಾಸಕರು, ಅವರ ಕುಟುಂಬದವರು, ವಿವಿಐಪಿ ಹಾಗೂ ಹಿರಿಯ ಅಧಿಕಾರಿಗಳು ಕುಳಿತುಕೊಳ್ಳಬಹುದಾಗಿದೆ. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ 40 ಸಆವಿರ ಆಸನ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!