ಇಂದು ಭಾರತ-ವೆಸ್ಟ್ ಇಂಡೀಸ್ ಅಂತಿಮ ಏಕದಿನ ಪಂದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ, ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸರಣಿ ನಡೆಯುತ್ತಿದ್ದು, ಭಾರತ ಈಗಾಗಲೇ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಸರಣಿ ಕ್ಲೀನ್‌ಸ್ವೀಪ್ ಮಾಡುವತ್ತ ಟೀಂ ಇಂಡಿಯಾ ಪ್ಲ್ಯಾನ್ ಮಾಡಿದೆ. ಇತ್ತ ಕೆರಿಬಿಯನ್ನರು ಕನಿಷ್ಠ ಒಂದು ಪಂದ್ಯದಲ್ಲಾದರೂ ಗೆಲುವು ಸಾಧಿಸುವ ಪ್ರಯತ್ನ ಮಾಡಲಿದೆ.

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಆರು ವಿಕೆಟ್‌ಗಳ ಗೆಲುವು ಕಂಡಿದ್ದು, ಎರಡನೇ ಪಂದ್ಯದಲ್ಲಿ 44 ರನ್‌ಗಳಿಂದ ಗೆದ್ದಿ ಬೀಗಿತ್ತು. ರೋಹಿತ್ ಪಡೆ ಪ್ರದರ್ಶನಕ್ಕೆ ಎಲ್ಲೆಡೆ ಶ್ಲಾಘನೆ ಸಿಕ್ಕಿತ್ತು. ಕಳೆದೆರಡು ಪಂದ್ಯಗಳಲ್ಲಿ ನಿರೀಕ್ಷಿತ ರೀತಿ ಆಟ ಆಡಲು ಸಾಧ್ಯವಾಗದ ಬ್ಯಾಟರ್‌ಗಳ ಮೇಲೆ ಈ ಬಾರಿ ನಿರೀಕ್ಷೆ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!