ಇಂದು ಸಿದ್ದಗಂಗಾ ಶ್ರೀಗಳ ನಾಲ್ಕನೇ ಪುಣ್ಯಸ್ಮರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದುನಡೆದಾಡುವ ದೇವರು, ಮಹಾಶಿವಯೋಗಿ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳು ನಾಲ್ಕನೇ ಪುಣ್ಯಸ್ಮರಣೆ.
ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಜೃಂಭಣೆಯ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಸರಳವಾಗಿ ಪುಣ್ಯಸ್ಮರಣೆಯನ್ನು ಆಚರಿಸಲಾಗಿತ್ತು. ಇಂದು ಪೂಜ್ಯರ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. ಬೆಳಗ್ಗೆಯಿಂದಲೇ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ ಇನ್ನಿತರ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗಿದೆ.

ಬೆಳಗ್ಗೆಯೇ ಬೆಳ್ಳಿರಥದಲ್ಲಿ ಸ್ವಾಮೀಜಿಗಳ ಪುತ್ಥಳಿಯಿಟ್ಟು ಮೆರವಣಿಗೆ ನಡೆಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದ್ದು, ಸಿಎಂ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದಾರೆ. ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!