ಟಾಪ್-2ಗೇರಲು ಇಂದು ಕೊನೆಯ ಕದನ! ಮೈದಾನದಲ್ಲಿ ಕಾದಾಡಲಿವೆ RCB V/S LSG

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್‌ನಲ್ಲಿ ಪ್ಲೇ ಆಫ್‌ನ 4 ತಂಡಗಳು ಈಗಾಗಲೇ ಅಂತಿಮಗೊಂಡಿವೆ. ಆದರೆ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯಲು ರೋಚಕ ಸ್ಪರ್ಧೆ ನಡೆಯುತ್ತಿದ್ದು, ಇಂದು ಕ್ಲೈಮ್ಯಾಕ್ಸ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಲಖನೌ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ.

ಸದ್ಯ 13 ಪಂದ್ಯಗಳಲ್ಲಿ 17 ಅಂಕ ಸಂಪಾದಿಸಿರುವ ಆರ್‌ಸಿಬಿ, ಲಖನೌ ವಿರುದ್ಧ ಗೆದ್ದರೆ ಅಗ್ರ-2ರಲ್ಲಿ ಸ್ಥಾನ ಪಡೆದುಕೊಳ್ಳಲಿದ್ದು, ಕ್ವಾಲಿಫೈಯರ್-1ರಲ್ಲಿ ಪಂಜಾಬ್ ವಿರುದ್ಧ ಆಡಲಿದೆ.

ಒಂದು ವೇಳೆ ಸೋತರೆ ಆರ್‌ಸಿಬಿ 3ನೇ ಸ್ಥಾನಿಯಾಗಿ ಎಲಿಮಿನೇಟ‌ರ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಬೇಕಾಗುತ್ತದೆ. ಇದೀಗ ಲಖನೌ ಎದುರಿನ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ನಂಬಿಗಸ್ಥ ವೇಗಿ ಜೋಶ್ ಹೇಜಲ್‌ವುಡ್ ತಂಡಕೂಡಿಕೊಂಡಿದ್ದು ರಜತ್ ಪಾಟೀದಾರ್ ಪಡೆಯ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್‌ ಈ ಬಾರಿ 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿದ್ದು, ಕೊನೆ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೂರ್ನಿಗೆ ವಿದಾಯ ಹೇಳಲು ಕಾಯುತ್ತಿದೆ. ನ್ಯೂಜಿಲೆಂಡ್‌ನ ವಿಲಿಯಂ ಒರೂರ್ಕೆ ಆಗಮನ ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!