ರಂಗೇರಿದೆ ಚುನಾವಣಾ ಅಖಾಡ, ಬಹಿರಂಗ ಪ್ರಚಾರಕ್ಕೆ ಇಂದೇ ಕಡೆ ದಿನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದೆ, ಎರಡೇ ದಿನದಲ್ಲಿ ಮತದಾರ ರಾಜ್ಯ ರಾಜಕಾರಣಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಮತದಾರರನ್ನು ಸೆಳೆಯಲು ರಾಜ್ಯ, ರಾಷ್ಟ್ರ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದು, ಇಂದು ಅಬ್ಬರದ ಪ್ರಚಾರಕ್ಕೆ ತೆರೆ ಬೀಳಲಿದೆ.

ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, 5 ಗಂಟೆ ನಂತರ ಯಾವುದೇ ಸಭೆ, ಸಮಾರಂಭ, ಉತ್ಸವ, ರೋಡ್ ಶೋ, ಧ್ವನಿವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.

ಇನ್ನು ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ಯಾವುದೇ ನಾಯಕರಿಗೆ ಅವಕಾಶವಿಲ್ಲ. ಅಭ್ಯರ್ಥಿ ಸೇರಿ ೬ ಮಂದಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ. ಕೊನೆಯ ಹಂತದ ಪ್ರಚಾರ ಇದಾಗಿದ್ದು, ಮತದಾರರ ಮನವೊಲಿಸಲು ನಾಯಕರು ಸಫಲರಾಗಿದ್ದಾರಾ? ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!