September 14, 2026
Monday, September 14, 2026
spot_img

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ, ಭಕ್ತಿಯಲ್ಲಿ ಮಿಂದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ.

ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರುಶನ ನೀಡಿಲಿದ್ದಾರೆ.

ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ರಾತ್ರಿ 8 ಗಂಟೆಗೆ ಸಲ್ಲುವ ಪುಷ್ಯ ನಕ್ಷತ್ರದಲ್ಲಿ ಚಾಲನೆ ಸಿಗಲಿದೆ. ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಜ್ರಖಚಿತ ವೈರಮುಡಿ ಆಭರಣಗಳನ್ನು ಮೇಲುಕೋಟೆಗೆ ರವಾನೆ ಮಾಡಲಾಗುತ್ತಿದೆ.

ಬಳಿಕ ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಾಲಯದಲ್ಲಿ ಮೊದಲು ಪೂಜೆ ಮಾಡಿ, ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು, ಪಾಂಡವಪುರ, ಜಕ್ಕನಹಳ್ಳಿ ಮಾರ್ಗವಾಗಿ ಆಭರಣ ಮೇಲುಕೋಟೆ ತಲುಪಲಿದೆ.ಮಾರ್ಗದುದ್ದಕ್ಕೂ ಸಿಗುವ ಗ್ರಾಮಗಳಲ್ಲಿ ವೈರಮುಡಿ ಕಿರೀಟಕ್ಕೆ ಪೂಜೆಗೆ ಅವಕಾಶವಿದ್ದು, ಸಂಜೆ ವೇಳೆಗೆ ಮೇಲುಕೋಟೆ ತಲುಪಲಿದೆ. ಬಳಿಕ ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ ಮೂರ್ತಿಗೆ ಕಿರೀಟಧಾರಣೆ ಮಾಡಿ ಉತ್ಸವಕ್ಕೆ ಚಾಲನೆ ಸಿಗಲಿದೆ.

ಈ ಸಂಭ್ರಮದಲ್ಲಿ ಭಾಗಿಯಾಗಲು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದು, ಸಕಲ ಸಿದ್ಧತೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !