ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಬಗ್ಗೆ ಚರ್ಚಿಸಲು ಇಂದು ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ಭೇಟಿ ನೀಡಲಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ನಡುವೆ ಸೀಟು ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ, ಇಂದು ಹೈಕಮಾಂಡ್ ಭೇಟಿ ಮಾಡಿ ಮೈತ್ರಿ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ತೀವ್ರ ಅಗತ್ಯತೆ ಇದೆ. ಈ ಬಗ್ಗೆ ಚರ್ಚೆ ಮಾಡುತ್ತೇವೆ. ಮೈತ್ರಿ ಎಂದರೆ ತಮ್ಮ ಪಕ್ಷದ ನಿಲುವನ್ನು ಬಿಟ್ಟುಬಿಡುವುದಲ್ಲ. ನಮ್ಮ ನಿಲುವುಗಳು ಎಂದೂ ಬದಲಾಗುವುದಿಲ್ಲ. ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತೇವೆ ಎಂದಿದ್ದಾರೆ.