Wednesday, September 3, 2025

ಇಂದು ಬಹುಕಾಲದ ಗೆಳೆಯನ ಜೊತೆ ಸಪ್ತಪದಿ ತುಳಿಯಲಿದ್ದಾರೆ ನಿರೂಪಕಿ ಅನುಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಇಂದು 10:56ರ ಶುಭ ಮೂಹೂರ್ತದಲ್ಲಿ ಸಪ್ತಪದಿ ತುಳಿಯಲಿದ್ದಾರೆ.

ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ವಿವಾಹ ನಡೆಯಲಿದೆ.

ಮದುವೆಗೂ ಹಿಂದಿನ ದಿನ ಬುಧವಾರ ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿ ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ.

ಮೂಲತಃ ಉದ್ಯಮಿ ಆಗಿರುವ ರೋಷನ್ ಜೊತೆ ಅನುಶ್ರೀ ಮದುವೆಯಾಗುತ್ತಿದ್ದಾರೆ. ಇದು ಲವ್‌ ಕಮ್‌ ಅರೇಂಜ್‌ ಮ್ಯಾರೇಜ್‌ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ