ಇಂದು ಅಧಿಕೃತವಾಗಿ ಕಮಲ ಹಿಡಿಯಲಿದ್ದಾರೆ ಸುಮಲತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ಈ ಬಗ್ಗೆ ಸುಮಲತಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದೆ. ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎನ್ನುವ ಆಶಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದೆ. ಅಂತೆಯೇ ಇಂದು ಬೆಳಗ್ಗೆ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಎಂದಿನಂತೆ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಎಸ್‌ವೈ, ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಶಿ, ಆರ್. ಅಶೋಕ್ ನೇತೃತ್ವದಲ್ಲಿ ಕಮಲ ಸೇರ್ಪಡೆಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!