ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಸ್ವತಃ ಸಿಎಂ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಅದರೊಂದಿಗೆ ಹಲವು ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದವರ ಜನರಿಗಾಗಿ ವಸತಿ ಇಲಾಖೆಯಿಂದ 6 ಲಕ್ಷ ಮನಗಳ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ರಾಜ್ಯ ನಾಗರಿಕ ಸೇವಾ ನಿಯಮಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆಯ ಸೇವಾ ನಿಯಮಗಳ ವಿಧೇಯಕ ತಿದ್ದುಪಡಿ ಮಾಡುವ ಕುರಿತು ಚರ್ಚೆ. ಹಾಗೆಯೇ  ಎಎಚ್ ಪಿ ಘಟಕದಡಿ ಅನುಮೋದನೆಗೊಂಡಿರುವ ಮನೆಗಳಿಗೆ 500 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸುವುದಕ್ಕೂ ಸಂಪುಟ ಸಭೆ ಒಪ್ಪಿಗೆ ನೀಡಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss