ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಗ್ರರು ಹಾಗೂ ಭದ್ರತಾ ಪಡೆಗಳು ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.
ಈಗಾಗಲೇ ಕ್ಯಾಪ್ಟನ್ ಪ್ರಾಂಜಲ್ ಪಾರ್ಥೀವ ಶರೀರ ಬೆಂಗಳೂರು ತಲುಪಿದ್ದು, ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೆಜೆ ಜಾರ್ಜ್, ಬಿ.ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಅಂತಿಮ ದರ್ಶನ ಪಡೆದಿದ್ದಾರೆ.
ಇಂದು ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಆನೇಕಲ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕುಟುಂಬದವರ ದುಃಖದಲ್ಲಿ ನಾನು ಭಾಗಿ, ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಸಿಗಲಿದೆ, ಸರ್ಕಾರದಿಂದ ೫೦ ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಇದೀಗ ಕ್ಯಾಪ್ಟನ್ ಪಾರ್ಥೀವ ಶರೀರವನ್ನು ಬನ್ನೇರುಘಟ್ಟದ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ಸೇನಾ ಗೌರವದ ನಂತರ ಅಂತಿಮ ವಿಧಿ ವಿಧಾನ ನಡೆಯಲಿದೆ.
ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಪ್ರಾಂಜಲ್ ಎಂ.ವೆಂಕಟೇಶ್ ಹಾಗೂ ಅನುರಾಧಾ ದಂಪತಿಯ ಒಬ್ಬನೇ ಮಗನಾಗಿದ್ದರು. ಎರುಡ ವರ್ಷದ ಹಿಂದಷ್ಟೇ ಪ್ರಾಂಜಲ್ ವಿವಾಹ ನೆರವೇರಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ.