Saturday, October 25, 2025

ಇಂದು ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ, ಪ್ರತೀ ವರ್ಷದಂತೆ ಈ ಬಾರಿಯೂ ಸಾಂಸ್ಕೃತಿಕ ನಗರಿಯಿಂದ ಬಾಗಿನ ಅರ್ಪಣೆಯಾಗಿದೆ.

ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ. ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು. ಬಳಿಕ ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು. 

ರಾಕ್ಷನನ್ನ ಸಂಹರಿಸಿದ ಚಾಮುಂಡೇಶ್ವರಿ ಶಾಂತರೂಪ ತಾಳಿದ್ದು ಬಿಂಡಿಗ ಬೆಟ್ಟದಲ್ಲಿ ಎನ್ನುವ ನಂಬಿಕೆ ಇದೆ. ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರುಶನ ನೀಡುವ ದೇವೀರಮ್ಮ, ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರುಶನ ನೀಡುತ್ತಾಳೆ.

error: Content is protected !!