ʼಇಂದು ಬೇರೆ ದೇಶಗಳಲ್ಲೂ ಯೋಗ ಮಾಡ್ತಾರೆ ಅಂದ್ರೆ ಅದಕ್ಕೆ ಮೋದಿಯೇ ಕಾರಣʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.  ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ನಡೆಯ ಬೃಹತ್‌ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಪವನ್‌ ಕಲ್ಯಾಣ್‌ ಮಾತನಾಡಿದ್ದು, ಬೇರೆ ದೇಶಗಳಲ್ಲಿಯೂ ಇಂದು ಜನ ಯೋಗದ ಮಹತ್ವ ಅರಿತಿದ್ದಾರೆ ಎಂದರೆ ಅದಕ್ಕೆ ಪ್ರಧಾನಿ ಮೋದಿಯೇ ಕಾರಣ. ವಿಶ್ವಸಂಸ್ಥೆಯಲ್ಲಿ ಯೋಗದ ಮಹತ್ವದ ಬಗ್ಗೆ ಅವರು ಮನವರಿಕೆ ಮಾಡಿದರು. ಇದರಿಂದಾಗಿ ಈ ದಿನವನ್ನು ವಿಶ್ವ ಯೋಗ ದಿನವನ್ನಾಗಿ ಆಚರಿಸಲು ಸಾಧ್ಯವಾಗಿದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!