ಇಂದು ʻಭಾರತ್‌ ಬಂದ್‌ʼ ದೇಶಾದ್ಯಂತ 25 ಕೋಟಿ ಕಾರ್ಮಿಕರಿಂದ ಮುಷ್ಕರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಇಂದು ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.

ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ.

ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳಿವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್‌ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಬಂದ್‌ ಎಫೆಕ್ಟ್‌ ತೀವ್ರ ಕಡಿಮೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!