Sunday, September 14, 2025

ಇಂದು ಭಾರತ- ಪಾಕಿಸ್ತಾನ ಹೈವೋಲ್ಟೇಜ್ ಕದನ: ಎಷ್ಟು ಗಂಟೆಗೆ ಆರಂಭ? ಎಲ್ಲಿ ಪ್ರಸಾರವಾಗುತ್ತೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಟಿ20 ಪಂದ್ಯ ಆರಂಭವಾಗಲಿದೆ. 7.30ಕ್ಕೆ ಟಾಸ್ ನಡೆಯಲಿದೆ. ಏ

ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಪ್ರಸಾರ ಮಾಡುತ್ತಿದೆ. ಸೋನಿಲಿವ್ ಮತ್ತು ಫ್ಯಾನ್‌ಕೋಡ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ದೂರದರ್ಶನ ಮತ್ತು ಜಿಯೋ ಟಿವಿಯಲ್ಲಿ ಉಚಿತವಾಗಿ ಪಂದ್ಯಗಳನ್ನು ವೀಕ್ಷಿಸುವ ಅವಕಾಶವೂ ಇದೆ.

ಅದೇ ರೀತಿ ಭಾರತ-ಪಾಕಿಸ್ತಾನ ಪಂದ್ಯವನ್ನು ಸಹ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ಅಭಿಮಾನಿಗಳು ನೇರಪ್ರಸಾರದಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ