ತೊಗರಿ ಬೆಳೆ ಹಾನಿ: ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ!

ಹೊಸದಿಗಂತ ವರದಿ,ಕಲಬುರಗಿ:

ನೆಟೆ ರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ನಡುವೆ 2022-23 ರ ಸಾಲಿನಲ್ಲಿ 5.50 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ, ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ 4.78 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 1.30 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತಿವೃಷ್ಟಿ ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗ ತೊಡಗಿದ್ದು, ಆದರೂ ಕೂಡಾ ಅಷ್ಟೋ ಇಷ್ಟೋ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಇದೀಗ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡ ನಂತರ ತೀವ್ರ ಕಂಗಾಲಾಗಿದ್ದಾರೆ.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವಂತೆ, ಈಗ ನೆಟೆ ರೋಗದಿಂದ ಹಾನಿಗೊಳಗಾದ ರಾಜ್ಯದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಿ ಜೊತೆಗೆ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅವರು ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!