ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಟೋಕಿಯೋ ಒಲಿಂಪಿಕ್ಸ್ನಲ್ಲಿ ಮೇರಿ ಕೋಮ್ ಶುಭಾರಂಭ ಮಾಡಿದ್ದಾರೆ. ಭಾನುವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಡೊಮಿನಿಕನ್ ರಿಪಬ್ಲಿಕನ್ನ ಮಿಗುಯೆಲಿನಾ ಹೆರ್ನಾಂಡೆಜ್ ಗಾರ್ಸಿಯಾ ವಿರುದ್ಧ ಗೆಲುವು ಸಾಧಿಸಿ ಫ್ರಿ ಕ್ವಾರ್ಟರ್ ಪೈನಲ್ ಪ್ರವೇಶಿಸಿದ್ದಾರೆ.
51 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿದ್ದ ಮೇರಿ ಕೋಮ್ ಮೊದಲ ಸುತ್ತಿನಿಂದಲೇ ಬಾಕ್ಸರ್ ಡಾರ್ಸಿಯಾ ವಿರುದ್ಧ ಪ್ರಾಬಲ್ಯ ಸಾಧಿಸಿ 4-1ರ ಅಂತರದಿಂದ ಗೆಲುವು ಸಾಧಿಸಿದರು.
ಇನ್ನು ಮುಂದಿನ ಪಂದ್ಯದಲ್ಲಿ ವಿಶ್ವದ 3ನೇ ಶ್ರೇಯಾಂಕದ ಹಾಗೂ ರಿಯೋ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದಿರುವ ಇಂಗ್ರಿಟ್ ವೆಲೆನ್ಸಿಯಾ ವಿರುದ್ಧ ಕಾದಾಡಲಿದ್ದಾರೆ. ಮುಂದಿನ ಪಂದ್ಯ ಜುಲೈ 29 ಕ್ಕೆ ನಡೆಯಲಿದೆ.