ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೋಕಿಯೋ ಒಲಿಂಪಿಕ್ಸ್​: ಭಾರತೀಯ ಅಥ್ಲೀಟ್ಸ್ ಗಳಿಗೆ ಪ್ರೋತ್ಸಾಹಿಸುವಂತೆ ಕರೆ ನೀಡಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್​!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋದಲ್ಲಿ ನಡೆಯುವ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಭಾಗಿಯಾಗಲು ಭಾರತೀಯ ಅಥ್ಲೀಟ್ಸ್ ಗಳಿಗೆ ಕೇಂದ್ರ ಕ್ರೀಡಾ ಮಂತ್ರಿ ಅನುರಾಗ್ ಠಾಕೂರ್​ ಸ್ಫೂರ್ತಿ ತುಂಬಿದರು.
ಸಂಸತ್ತಿನ ಹೊರಗಡೆ ವಿವಿಧ ಸಂಸದರೊಂದಿಗೆ ಸೇರಿಕೊಂಡಿದ್ದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ​​ ಕ್ರೀಡಾಳುಗಳಿಗೆ ಪ್ರೋತ್ಸಾಹ ತುಂಬಿದ್ದು, ‘victory punch’ & chant Jai Hind ಎಂಬ ಘೋಷಣೆ ಕೂಗಿದ್ದಾರೆ.
ಈ ವೇಳೆ ದೇಶದ ಜನರಿಗೆ ತಮ್ಮ ಮನೆಯ ಸದಸ್ಯರು ಅಥವಾ ಕೆಲಸ ಮಾಡುವ ಸ್ಥಳದಿಂದಲೇ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ರೀತಿಯಲ್ಲಿ ಮೇಲಿನಂತೆ ಘೋಷಣೆ ಕೂಗಿ ವಿಡಿಯೋ ಮಾಡಲು ಮನವಿ ಮಾಡಿದ್ದಾರೆ. ಅವುಗಳನ್ನು ಬೇರೆ ಬೇರೆ ಗ್ರೂಪ್​ಗಳಿಗೂ ಶೇರ್ ಮಾಡುವ ಮೂಲಕ ಭಾರತೀಯ ಕ್ರೀಡಾಪಟುಗಳಿಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಅಥ್ಲೀಟ್ಸ್ಗೆ ಪ್ರೇರೇಪಿಸುವುದು ನಮ್ಮ ಕರ್ತವ್ಯ. ಭಾರತದ ಪ್ರತಿಯೊಬ್ಬ ನಾಗರೀಕರು ಹಾಗೂ ಇಡೀ ದೇಶ ನಿಮ್ಮೊಂದಿಗಿದೆ. ಉತ್ತಮ ಪ್ರದರ್ಶನ ನೀಡಿ ಎಂದು ಠಾಕೂರ್‌ ಶುಭ ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss