Wednesday, August 17, 2022

Latest Posts

ಟೋಕಿಯೋ ಪ್ಯಾರಾಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ಬ್ಯಾಡ್ಮಿಂಟನ್ ತಾರೆ ಪ್ರಮೋದ್ ಭಗತ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಲ್ 3 ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಪ್ರಮೋದ್ ಭಗತ್ ಗೆದ್ದು ಫೈನಲ್ಸ್ ಪ್ರವೇಶಿಸಿದ್ದಾರೆ.
ಈ ಮೂಲಕ ಭಾರತಕ್ಕೆ ಮತ್ತೊಂದು ಮೆಡಲ್ ಖಚಿತಪಡಿಸಿದ್ದಾರೆ.
ಜಪಾನ್‌ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದಾರೆ. ಭಗತ್ ತಮ್ಮ ವಿಭಾಗದಲ್ಲಿ ವಿಶ್ವ ನಂ 1 ಸ್ಥಾನದಲ್ಲಿದ್ದಾರೆ. ಒಡಿಶಾ ಮೂಲದ ಭಗತ್ ಅವರ ಎಡಗಾಲಿಗೆ ಪೋಲಿಯೋ ತಗುಲಿದೆ. ಎಲ್ಲವನ್ನು ಸಕಾರಾತ್ಮಕವಾಗಿಯೇ ತೆಗೆದುಕೊಳ್ಳುವ ಭಗತ್ ಇದೀಗ ದೇಶಕ್ಕೆ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!