ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಏಪ್ರಿಲ್ 1 ರಿಂದ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆಯ ಭಾಗವಾಗಿ ಟೋಲ್ ಸುಂಕ ಹೆಚ್ಚಳಕ್ಕೆ ಎನ್ಎಚ್ಎಐ ಮುಂದಾಗಿದೆ.
ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿ.