ಇಂದಿನಿಂದಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಮೈಸೂರು ಹೈವೇ ಈಗಾಗಲೇ ಲೋಕಾರ್ಪಣೆಯಾಗಿದ್ದು, ಇಂದಿನಿಂದಲೇ ಟೋಲ್ ಸಂಗ್ರಹ ಆರಂಭವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಕ್ಕೆ ನಿರ್ಧಾರ ಮಾಡಲಾಗಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಝಾ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ.

ಎಷ್ಟು ಟೋಲ್?
ಕಾರ್, ಜೀಪ್, ವ್ಯಾನ್ ಏಕಮುಖ ಸಂಚಾರಕ್ಕೆ 135 ರೂಪಾಯಿ ದರ ನಿಗದಿಪಡಿಸಲಾಗಿದೆ. ಎರಡೂ ಸೈಡ್‌ಗೆ 205 ರೂಪಾಯಿ ನಿಗದಿಪಡಿಸಲಾಗುವುದು.

ಲಘು ವಾಹನಗಳು, ಲಘು ಸರಕು ವಾಹನಗಳು, ಮಿನಿ ಬಸ್ ಏಕಸಂಚಾರಕ್ಕೆ 220 ರೂಪಾಯಿ ಹಾಗೂ ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ ನಿಗದಿಪಡಿಸಲಾಗಿದೆ. ಬಸ್ ಅಥವಾ ಟ್ರಕ್ ಏಕಮುಖ ಸಂಚಾರಕ್ಕೆ 460 ರೂಪಾಯಿ, ಎರಡೂ ಸೈಡ್‌ಗೆ 690 ರೂಪಾಯಿ ದರ ನಿಗದಿಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!