ಕರ್ತವ್ಯಕ್ಕೆ ಹೋಗುತ್ತಿದ್ದ ಯೋಧನನ್ನು ಕಂಬಕ್ಕೆ ಕಟ್ಟಿ ಹೊಡೆದ ಟೋಲ್ ಪ್ಲಾಜಾ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟೋಲ್ ಪ್ಲಾಜಾ ವೊಂದರ ಬಳಿ ಉಂಟಾದ ವಾಗ್ವಾದದ ವೇಳೆ ಸೇನಾ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಯೋಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿ ಟೋಲ್ ಪ್ಲಾಜಾದ ನಾಲ್ವರು ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಕಪಿಲ್ ಕವಾಡ್ ಎಂಬ ಯೋಧ ಹಲ್ಲೆಗೊಳಗಾದವರು. ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಇವರು, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ.

ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನು ಥಳಿಸಿದ್ದಾರೆ. ಕಪಿಲ್ ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!