ಟಾಲಿವುಡ್ ನಟ ಮಹೇಶ್ ಬಾಬು ತಂದೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಲಿವುಡ್ ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ 80 ವರ್ಷದ ಲೆಜೆಂಡ್ ಆಕ್ಟರ್ ಕೃಷ್ಣ ಇತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಕೃಷ್ಣ ಅವರ ಆರೋಗ್ಯ ಸ್ಟೇಬಲ್ ಆಗಿದೆ. ಜನರಲ್ ಚೆಕಪ್‌ಗೆ ಆಸ್ಪತ್ರೆಗೆ ಹೋಗಿದ್ದರು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷ್ಣ ಅವರ ಪಿಆರ್ ಸುರೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನವೆಂಬರ್ 13ರಂದು ಹಿರಿಯ ನಟ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ದಾಖಲಿಸಲಾಗಿತ್ತು ಎನ್ನಲಾಗುತ್ತಿದೆ. ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನದ ಬಳಿಕ ಕೃಷ್ಣ ಅವರ ಆರೋಗ್ಯದಲ್ಲೂ ಸಮಸ್ಯೆ ಕಂಡು ಬಂದಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಇತ್ತೀಚೆಗಷ್ಟೇ ತಾಯಿಯನ್ನ ಕಳೆದುಕೊಂಡು ಆಘಾತದಲ್ಲಿ ನಟ ಮಹೇಶ್ ಬಾಬು ಇದ್ದು, ಇದೀಗ ತಂದೆಯ ಆರೋಗ್ಯದ ಏರುಪೇರು ಮತ್ತಷ್ಟು ಬೇಸರ ತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!