ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಟಾಲಿವುಡ್ ನಟ ಸಾಯಿ ಧರಮ್ ತೇಜ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ.
ಸಾಯಿಯವರ ಕಾಲರ್ ಮೂಳೆ ಮುರಿದಿದೆ. ಇದಕ್ಕೆ ಅಪೋಲೋ ಆಸ್ಪತ್ರೆ ವೈದ್ಯಕೀಯ ತಂಡದ ಡಾ.ಅಲೋಕ್ ರಂಜನ್ ಐಸಿಯುವಿನಲ್ಲಿ ತೇಜ್ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.
ತೇಜ್ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಇತ್ತೀಚೆಗೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ತೇಜ್ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ತೇಜ್ಗೆ ಮಾಡಿದ ಕಾಲರ್ ಬೋನ್ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ತಿಳಿಸಲಾಗಿದೆ. ಶೀಘ್ರದಲ್ಲೇ ನಟನ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಪ್ರಕಟಿಸಲಿದ್ದಾರೆ.
ನಟ ಸಾಯಿ ಧರಮ್ ತೇಜ್ಗೆ ಶುಕ್ರವಾರ ಅಪಘಾತ ಸಂಭವಿಸಿತ್ತು. ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಲವು ಮೂಲಗಳ ಪ್ರಕಾರ, ರಸ್ತೆಯಲ್ಲಿ ಬಿದ್ದಿದ್ದ ಮರಳಿನಿಂದ ಬೈಕ್ ಸ್ಕಿಡ್ ಆಗಿ ಅಪಘಾತವಾಗಿದೆ ಎನ್ನಲಾಗಿದೆ. ಪ್ರಕರಣದ ಸಿಸಿಟಿವಿ ಫೂಟೇಜ್ ಕೂಡ ಲಭ್ಯವಾಗಿದೆ. ಹೈದರಾಬಾದ್ನ ಮಾದಾಪುರ ಕೇಬಲ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿತ್ತು.