ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಟಾಲಿವುಡ್ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ ಬೈಕ್ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಹೈದರಾಬಾದ್ನ ಕೇಬಲ್ ಬ್ರಿಡ್ಜ್ನ ಬಳಿ ಸಾಯಿಧರ್ಮ ಬೈಕ್ ಅಪಘಾತವಾಗಿದ್ದು, ಸ್ಥಳದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿನಿಮಾ ದಿಗ್ಗಜರು ಆಸ್ಪತ್ರೆಗೆ ಭೇಟಿ ನೀಡಿ ಸಾಯಿಧರ್ಮ ತೇಜ್ ಆರೋಗ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದ್ದು, ಇದೀಗ ಸಾಯಿಧರ್ಮತೇಜ್ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.