ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..
ಹೊಸದಿಗಂತ ಆನ್ಲೈನ್ ಡೆಸ್ಕ್:
ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಚಾರ್ಮಿ ಕೌರ್ ಅವರನ್ನು ಇಡಿ ಗುರುವಾರ ಸುಧೀರ್ಘವಾಗಿ ವಿಚಾರಣೆ ನಡೆಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ಹಣಕಾಸು ವಹಿವಾಟು ನಡೆದಿದೆ ಎಂದು ಆರೋಪಿಸಿ ನಿರ್ದೇಶಕ ಪುರಿ ಜಗನ್ನಾಥ್ ಒಳಗೊಂಡಂತೆ 12 ನಟ-ನಟಿಯರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಚಾರ್ಮಿ ಕೌರ್ ಅವರನ್ನು ಹೈದರಾಬಾದ್ನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದರು.
ಈ ವೇಳೆ ಕೌರ್ ಅವರು ಲೆಕ್ಕ ಪರಿಶೋಧಕರ ಜೊತೆ ಆಗಮಿಸಿ 2015 ರಿಂದ 2021 ರವರೆಗಿನ ತಮ್ಮ ಬ್ಯಾಂಕ್ ವಹಿವಾಟಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಚಾರ್ಮಿ ಅವರು ವಿಜಯ್ ದೇವರಕೊಂಡ ನಟನೆಯ, ಪುರಿ ಜಗನ್ನಾಥ್ ನಿರ್ದೇಶನದ ಲೈಗರ್ ಸಿನಿಮಾಕ್ಕೆ ಕೆಲಸ ಮಾಡುತ್ತಿದ್ದಾರೆ.