ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಟೊಮೆಟೊ, ಈರುಳ್ಳಿ, ಆಲೂಗೆಡ್ಡೆ ಬೆಲೆ ಗಗನಕ್ಕೇರಿದ್ದು, ಇದಕ್ಕೆ ಪ್ರಧಾನಿ ಮೋದಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಪ್ರಧಾನಿ ಮೋದಿಯವರು ಟೊಮೆಟೊ, ಈರುಳ್ಳಿ ಮತ್ತು ಆಲೂಗೆಡ್ಡೆ ತರಕಾರಿಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ .
ಆದರೆ ತಪ್ಪು ನೀತಿಗಳಿಂದಾಗಿ ಮೊದಲು ಬೀದಿಗೆ ಎಸೆಯಲಾಗುತ್ತಿದ್ದ ಟೊಮೆಟೊಗಳನ್ನು ಈಗ ಪ್ರತಿ ಕೆ.ಜಿಗೆ ₹100 ರಂತೆ ಮಾರಾಟ ಮಾಡಲಾಗುತ್ತಿದೆ’ ಎಂದು ಟ್ಟೀಟ್ ಮೂಲಕ ಟೀಕಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿನ ಆಜಾದ್‌ಪುರ ಮಂಡಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪ್ರತಿ ಕೆ.ಜಿ ಟೊಮೆಟೊವನ್ನು ₹80 ರಿಂದ 100 ರಂತೆ ಮಾರಾಟ ಮಾಡಲಾಗುತ್ತಿದೆ.