Saturday, March 25, 2023

Latest Posts

ನಾಳೆ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚಿರತೆಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದಕ್ಷಿಣ ಆಫ್ರಿಕಾದಿಂದ ನಾಳೆ ಭಾರತಕ್ಕೆ 12 ಚಿರತೆಗಳು ಬರಲಿವೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ಸಿ -17 ಗ್ಲೋಬ್ಮಾಸ್ಟರ್ ಕಾರ್ಗೋ ವಿಮಾನವು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರುತ್ತಿದೆ.ಇದರಲ್ಲಿ ಏಳು ಗಂಡು ಮತ್ತು ಐದು ಹೆಣ್ಣು ಚಿರತೆಗಳುಸೇರಿವೆ.

ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುವುದು.

ನಮ್ಮ ಪರಿಸರ ಸಮತೋಲನವನ್ನು ಪುನಃಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾದಿಂದ ಆಗಮಿಸುತ್ತಿರುವ 12 ಚಿರತೆಗಳು ಭಾರತಕ್ಕೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಿವೆ. ಭಾರತೀಯ ವಾಯುಪಡೆಯ ಸಿ -17 ಗ್ಲೋಬ್ಮಾಸ್ಟರ್ ವಿಮಾನವು ನಾಳೆ ಅವರನ್ನು ಮನೆಗೆ ಕರೆತರಲಿದೆ. ಅವರನ್ನು ಸ್ವಾಗತಿಸಲು ಸಿದ್ಧರಾಗಿ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!