ನಾಳೆ ಮಧ್ಯಾಹ್ನ SSLC ಪರೀಕ್ಷೆ ಫಲಿತಾಂಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

SSLC ಪರೀಕ್ಷೆ ಫಲಿತಾಂಶವು ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!