ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ ಎಂಟುಗಂಟೆವರೆಗೆ ಮಳೆಯಾಗಲಿದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಹೊಸನಗರ, ಸಾಗರ, ಸಿದ್ದಾಪುರ ಪ್ರದೇಶಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗದಲ್ಲಿ,ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ನಗರ ಸುತ್ತಮುತ್ತ ಮೋಡ ಅಥವಾ ತುಂತುರು ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗದಲ್ಲಿ ತುಂತುರು ಮಳೆಯಾಗಲಿದೆ.