ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ಬೆಳಗಾವಿ ಚಳಿಗಾಲದ ಅಧಿವೇಶನ ನಿಗದಿತ ದಿನಕ್ಕಿಂತ ಒಂದು ದಿನ ಮುಂಚೆ ಅಂದರೆ ನಾಳೆಯೇ ಮುಕ್ತಾಯಗೊಳ್ಳಲಿದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸದನದಲ್ಲಿ ಘೋಷಣೆ ಮಾಡಿದ್ದು, ಡಿ.29 ರಂದು ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ನಾಳೆ ಅಧಿವೇಶನ ಅಂತ್ಯಗೊಳ್ಳಲಿದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಪ್ತಿಗೊಳ್ಳಲಿದೆ ಎಂದು ಹೇಳಿದರು.