ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಮಂತ್ರಿ ಶ್ರೀರಾಮುಲು ಅವರಿಗೆ ನಾಳೆ ಬಿಗ್ ಡೇ. ಅಕ್ರಮ ಕೋವಿಡ್ ಪ್ರಕರಣದಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ವರದಿ ಆಧರಿಸಿ ವಿಶೇಷ ತನಿಖಾ ತಂಡದಿಂದ ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಆದೇಶಿಸುವ ಸಾಧ್ಯತೆಯಿದೆ.
ಸಿಎಂ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರನ್ನು ಕೇಳಿದಾಗ, ಸಂಪುಟದಲ್ಲಿ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ಕೋವಿಡ್ ಔಷಧಗಳ ಖರೀದಿ ಮತ್ತು ನಿರ್ವಹಣೆಯಲ್ಲಿ 340 ಕೋಟಿ ರೂಪಾಯಿ ದುರ್ಬಳಕೆಯಾಗಿದೆ. ಮಾರಾಟ ಒಪ್ಪಂದ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಮತ್ತು ತನಿಖೆಯನ್ನು ಪ್ರಾರಂಭಿಸಲು ಕುನ್ಹಾ ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಿದೆ.