Wednesday, October 5, 2022

Latest Posts

ನಾಳೆ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಬಾರ್ ಮತ್ತು ವೈನ್ ಶಾಪ್ ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಪ್ಟಂಬರ್ 4 ರಂದು ಗಣೇಶ ವಿಸರ್ಜನಾ ಮೆರವಣಿಗೆ ಇರುವ ಗ್ರಾಮಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಬಾರ್ ಮತ್ತು ವೈನ್ ಶಾಪ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆ, ಬೈಲೂರು, ಕೌಡೂರು ಹಾಗೂ ನೀರೆ ಗ್ರಾಮ, ಕಾಪು ತಾಲೂಕಿನ ಪುರಸಭಾ ವ್ಯಾಪ್ತಿ, ಕಾಪು ಪಡು, ಮಲ್ಲಾರು, ಮೂಳೂರು, ಉಳಿಯಾರಗೋಳಿ ಹಾಗೂ ಮಜೂರು ಗ್ರಾಮ, ಕುಂದಾಪುರ ತಾಲೂಕು ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಗಳು ನಡೆಯಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!