ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಾಳೆ ಸಿ.ಎಂ.ಯಡಿಯೂರಪ್ಪರಿಂದ ಜಿಂದಾಲ್ ತಾತ್ಕಾಲಿಕ ಆಕ್ಸಿಜನ್ ಬೆಡ್ ಆಸ್ಪತ್ರೆಗೆ ಚಾಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಜಿಂದಾಲ್ ಬಳಿ ನಿರ್ಮಿಸಲಾಗಿರುವ 1 ಸಾವಿರ ಆಕ್ಸಿಜನ್ ಬೆಡ್‍ಗಳಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ 300 ಹಾಸಿಗೆಗಳು ಸಿದ್ದಗೊಂಡಿದ್ದು,
ಮೇ 19ರಂದು ಸಂಜೆ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಪ್ರಕಟಣೆ ನೀಡಿದ ನಂತರ ನಾಲ್ಕು ತಜ್ಞ ವೈದ್ಯರು, 8 ಜನ ವೈದ್ಯರು ಈಗಾಗಲೇ ಬಂದಿದ್ದಾರೆ. ನರ್ಸ್ ಹಾಗೂ ಗ್ರೂಪ್ ಡಿ ಸಿಬ್ಬಂದಿ ಕೂಡ ಸಮರ್ಪಕ ಪ್ರಮಾಣದಲ್ಲಿದೆ/ 40 ವೈದ್ಯಕೀಯ ವಿದ್ಯಾರ್ಥಿಗಳು ಸೇರಿ ಅಚ್ಚುಕಟ್ಟಾಗಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದಲ್ಲಿ ನೀಡಲಾಗಿರುವ ಸಲಹೆಗಳು ಮತ್ತು ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುವುದು. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಬೇಕಾದರೆ ಗ್ರಾಪಂ ಸದಸ್ಯರಿಂದ ಹಿಡಿದು ಎಲ್ಲಾ ರೀತಿಯ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಂದಾಗಿ ಕಾರ್ಯ ನಿರ್ವಹಿಸಿ ಎಂದು ಮೋದಿಯವರು ಸಲಹೆ ನೀಡಿದ್ದಾರೆ; ಅವರ ಸಲಹೆಯಂತೆ ಎಲ್ಲರೂ ಒಂದಾಗಿ ಕೆಲಸ ಮಾಡಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ, ಆಕ್ಸಿಜನ್ ನಿರ್ವಹಣಾ ಕಮಿಟಿ, ಆಕ್ಸಿಜನ್ ಕೊರತೆಯಾಗದಂತೆ ನೋಡಿ ಕೊಳ್ಳುವುದರ ಜೊತೆಗೆ ಫ್ರಂಟ್‍ಲೈನ್ ವಾರಿಯರ್ಸ್‍ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸೈನ್ಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ, ಅದರಂತೆ ಎಲ್ಲಾ ಕ್ರಮಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಪ್ರಧಾನಿ ಮೋದಿಯವರು ಮುಂಬರುವ ಮೂರನೇ ಅಲೆಗೆ ಸಿದ್ಧತೆಯ ಜೊತೆಗೆ ಮಳೆಗಾಲದ ಸಮಯದಲ್ಲಿ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದು, ವಿದ್ಯುತ್ ನಿರಂತರ ಪೂರೈಕೆಗೆ ಶ್ರಮವಹಿಸುಂತೆ ತಿಳಿಸಿದ್ದಾರೆ ಅದರಂತೆ ಕಾರ್ಯ ನಿರ್ವಹಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss