ನಾಳೆ ಕೆಯುಡಬ್ಲ್ಯುಜೆ ಚುನಾವಣೆ: ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ

ದಿಗಂತ ವರದಿ ಮಡಿಕೇರಿ:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಯುಜೆ)ದ ಆಡಳಿತ ಮಂಡಳಿ ಹಾಗೂ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ( 27 ) ಚುನಾವಣೆ ನಡೆಯಲಿದೆ. ಆದರೆ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಕೊಡಗು ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಘಟಕಗಳ ಆಡಳಿತ ಮಂಡಳಿಗಳಿಗೂ ಭಾನುವಾರ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಚುನಾವಣಾ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿರುವುದು ಸ್ಪರ್ಧಿಗಳಲ್ಲಿ ತಳಮಳ ಉಂಟು ಮಾಡಿದೆ.

ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿ ಕೆಲವು ನ್ಯೂನ್ಯತೆಗಳಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸಂಘದ ಹಾಲಿ ಕಾರ್ಯದರ್ಶಿಯಾಗಿರುವ ಮಲ್ಲಿಕಾರ್ಜುನ ಬಂಗ್ಲೆ ಹಾಗೂ ಇತರರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈಗಾಗಲೇ ರಾಜ್ಯ ಸಂಘಕ್ಕೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಜಿ.ಸಿ. ಲೋಕೇಶ್, ರಾಜ್ಯ ಕಾರ್ಮಿಕ ಆಯುಕ್ತರು ಮತ್ತಿತರ ಅಧಿಕಾರಿಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ.

ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಅವರು, ಚುನಾವಣೆ ನಡೆದರೂ ಕೂಡಾ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಇಡೀ ರಾಜ್ಯದ ಚುನಾವಣಾ ಫಲಿತಾಂಶವನ್ನು ಮುಂದಿನ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!