ನಾಳೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ.
ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!