ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಇಂದು ರಾತ್ರಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ರವಾನೆಯಾಗಲಿದೆ.
ಮಧ್ಯರಾತ್ರಿ ಒಂದು ಗಂಟೆಗೆ ಕೆಂಪೇಗೌಡ ಏರ್‌ಪೋರ್ಟ್ ತಲುಪಲಿದ್ದು, ಬೆಂಗಳೂರು ಅಥವಾ ಬೆಳ್ತಂಗಡಿಯಲ್ಲಿ ಸ್ಪಂದನ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ಹೇಳಿದ್ದಾರೆ.
ನಾಳೆ ಮಧ್ಯಾಹ್ನದವರೆಗೆ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದು, ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ, ಈಡಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.