‘ಪಾಪ, ಬಜೆಟ್ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

‘ಪಾಪ, ಬಜೆಟ್ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು’ ಎಂದು ರಾಷ್ಟ್ರಪತಿಗಳ ಬಗ್ಗೆ ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇಂದು ಸಂಸತ್ತು ಆವರಣದಲ್ಲಿ ಸುದ್ದಿಗಾರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ್ದ ಭಾಷಣದ ಕುರಿತು ನೀಡಿದ ಹೇಳಿಕೆ ವಿವಾದ ಹುಟ್ಟುಹಾಕಿದೆ.

Poor lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು, ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು, ಬೇಸರದ ವಿಷಯ ಎಂದು ಸೋನಿಯಾ ಗಾಂಧಿ ರಾಷ್ಟ್ರಪತಿಗಳ ಭಾಷಣ ಬಗ್ಗೆ ಅಭಿಪ್ರಾಯ ಕೇಳಿದಾಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಷ್ಟ್ರಪತಿಗಳು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು. ಸರ್ಕಾರ ಕೈಗೊಂಡ ಉಪಕ್ರಮಗಳು ಮತ್ತು ಪ್ರಮುಖ ಗಮನ ಕ್ಷೇತ್ರಗಳನ್ನು ಅವರು ಎತ್ತಿ ತೋರಿಸಿದರು.

ರಾಷ್ಟ್ರಪತಿಗಳ ಭಾಷಣಕ್ಕೆ ವಿಪಕ್ಷಗಳು ಸಹಜವಾಗಿ ಟೀಕಿಸಿವೆ. ಪೂರ್ಣಿಯ ಕ್ಷೇತ್ರದ ಸ್ವತಂತ್ರ ಸಂಸದ ಪಪ್ಪು ಯಾದವ್ ರಾಷ್ಟ್ರಪತಿಗಳನ್ನು ‘ ರಬ್ಬರ್ ಸ್ಟಾಂಪ್’ ಎಂದು ಕರೆದರು. ರಾಷ್ಟ್ರಪತಿಗಳು ಒಂದು ಸ್ಟಾಂಪ್ ಇದ್ದಂತೆ. ಅವರು ಪ್ರೇಮ ಪತ್ರವನ್ನು ಓದಬೇಕು ಅಷ್ಟೇʼ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!