ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷಗಳ ಪಟ್ಟಿನಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ, ಟ್ರಂಪ್ ಮಧ್ಯಸ್ಥಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಸುಮಾರು 16 ಗಂಟೆಗಳ ಈ ಮೆಗಾ ಡಿಬೇಟ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲು ಸ್ಪಷ್ಟನೆ ಕೊಟ್ಟಿದ್ದಾರೆ.
ಇದಕ್ಕೆ ವಿಪಕ್ಷಗಳಿಂದ ಟೀಕೆಯೂ ಕೇಳಿಬಂದಿತು. ಸಂಸತ್‌ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಕೋಲಾಹಲವೇ ಎದ್ದಿತ್ತು. ಆಪರೇಷನ್ ಸಿಂಧೂರ ಚರ್ಚೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ವಿಪಕ್ಷಗಳಿಗೆ ಉತ್ತರ ಕೊಡುವ ಸಾಧ್ಯತೆಯಿದೆ.